TSK

TSK · ಯೋಹಾನನು 14:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

‹ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.›

¶ ‹“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.›

‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.

¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›

ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.