ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
TSK
TSK · ಯೋಹಾನನು 15:11
Treasury of Scripture Knowledge references in ಕನ್ನಡ IRV.
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”
‹ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,›
‹ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.›
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
¶ ಯಾವಾಗಲೂ ಸಂತೋಷಿಸಿರಿ,
ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.