TSK

TSK · ಯೋಹಾನನು 15:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.

ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.

¶ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,

¶ ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

¶ ‹“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.›

‹ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.›

‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.

“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.