TSK

TSK · ಯೋಹಾನನು 15:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, ‹“ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.›

ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.

ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.

¶ ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.

ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.