TSK

TSK · ಯೋಹಾನನು 16:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?

ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.

ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

‹ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.›

ಆಗ ಪೇತ್ರನು, ‹“ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ”› ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.

ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.

¶ ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,

¶ ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.

ಯೇಸು, ‹“ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು”› ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.

‹ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.›

¶ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.

ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.

ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.

ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.

ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,

ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.