TSK

TSK · ಯೋಹಾನನು 16:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.

‹‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.›

ಅದಕ್ಕೆ ಯೇಸು ಅವರಿಗೆ, ‹“ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.›

‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›

‹ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.›

‹ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು”› ಎಂದು ಹೇಳಿದನು.