ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
TSK
TSK · ಯೋಹಾನನು 16:7
Treasury of Scripture Knowledge references in ಕನ್ನಡ IRV.
‹ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಎಂದು ಹೇಳಿದನು.
ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
‹ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.›
‹ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.›
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, ‹“ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,›
¶ ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.