ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
TSK
TSK · ಯೋಹಾನನು 17:13
Treasury of Scripture Knowledge references in ಕನ್ನಡ IRV.
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
‹ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.›
‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
¶ ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.