TSK

TSK · ಯೋಹಾನನು 17:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.

‹ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.›

‹ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ”› ಅಂದನು.

‹ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.›

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

‹ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು›‹ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.›

ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.

ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.