ಮತ್ತಾಯನು 26:74
TSK
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
TSK
Treasury of Scripture Knowledge references in ಕನ್ನಡ IRV.
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
ಆತನು, ‹“ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ”› ಅಂದನು.
¶ ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.