TSK

TSK · ಯೋಹಾನನು 19:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ”› ಎಂದು ಹೇಳಿದನು

‹ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.›

¶ ‹“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.›

ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.