TSK

TSK · ಯೋಹಾನನು 19:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.

¶ ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.

ಯೇಸು, ‹“ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;›‹ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ”› ಎಂದನು.

‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›