TSK

TSK · ಯೋಹಾನನು 2:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.

¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

¶ ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, ‹“ನನ್ನನ್ನು ಹಿಂಬಾಲಿಸು”› ಎಂದನು.

ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.

¶ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.