TSK

TSK · ಯೋಹಾನನು 2:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.

¶ ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

¶ ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, ‹“ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.›

ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.

ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,