¶ ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
TSK
TSK · ಯೋಹಾನನು 20:16
Treasury of Scripture Knowledge references in ಕನ್ನಡ IRV.
¶ “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
¶ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
‹ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.›
ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, ‹“ನಿಮಗೆ ಏನು ಬೇಕು?”› ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
¶ ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.