TSK

TSK · ಯೋಹಾನನು 20:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.

ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

ಆಗ ಯೇಸು ಅವರನ್ನು ಭೇಟಿಯಾಗಿ, ‹“ನಿಮಗೆ ಶುಭವಾಗಲಿ”› ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.

‹ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.›

ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.

¶ ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.

‹ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!›

‹ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.›

‹ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,›‹ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.›

‹ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.›

ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.

ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.

ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.

¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.