ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
TSK
TSK · ಯೋಹಾನನು 21:16
Treasury of Scripture Knowledge references in ಕನ್ನಡ IRV.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
‹ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.›
¶ ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
¶ ‹“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.›
ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.