TSK

TSK · ಯೋಹಾನನು 3:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.

ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.

ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.

ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.

ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.