TSK

TSK · ಯೋಹಾನನು 4:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.

¶ ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.

ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

¶ ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;