TSK

TSK · ಯೋಹಾನನು 5:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

¶ ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.

ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, ‹“ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ”› ಅಂದನು.

ಯೇಸು ಆಕೆಗೆ, ‹“ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,›

‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›

“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.