ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
TSK
TSK · ಯೋಹಾನನು 5:28
Treasury of Scripture Knowledge references in ಕನ್ನಡ IRV.
¶ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.
‹‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ›
‹ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.›
ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.