TSK

TSK · ಯೋಹಾನನು 5:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›

ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಯೇಸು ಅವರಿಗೆ, ‹“ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.›

‹ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.›

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?

‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›