TSK

TSK · ಯೋಹಾನನು 6:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.

ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.

¶ ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.

¶ ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, ‹“ನಿಮಗೆ ಸಮಾಧಾನವಾಗಲಿ”› ಎಂದು ಅವರಿಗೆ ಹೇಳಿದನು.

¶ ‹“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.›

ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.