TSK

TSK · ಯೋಹಾನನು 6:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.

ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.

¶ ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.

ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.

ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,

ಆತನು, ‹“ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ”› ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.

ಆತನು, ‹“ನೀವೇ ಅವರಿಗೆ ಊಟಕ್ಕೆ ಕೊಡಿರಿ”› ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.

ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.