TSK

TSK · ಯೋಹಾನನು 7:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

¶ “‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,

ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

¶ ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.

ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.

ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,

¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›

ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›