TSK

TSK · ಯೋಹಾನನು 7:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.

ಆತನು, ‹“ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ”› ಅಂದನು.

‹ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ”› ಎಂದು ಹೇಳಿದನು.

ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.

¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, ‹“ತಂದೆಯೇ,›‹ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.›