TSK

TSK · ಯೋಹಾನನು 8:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?

ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”

ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.

‹ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.›

ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ ‹“ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ”› ಎಂದು ಹೇಳಿದನು.

ಯೇಸು, ‹“ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ”› ಎಂದು ಉತ್ತರಕೊಟ್ಟನು.

ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.

ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?