TSK

TSK · ಯೋಹಾನನು 8:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.›

ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, ‹“ಮೊದಲಿನಿಂದಲೇ›‹ನಾನು ನಿಮಗೆ ಹೇಳಿದಂಥದ್ದೇ.›

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ”› ಅಂದನು.

‹ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.›

‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›

ಯೇಸು ಆಕೆಗೆ, ‹“ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,›

ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›