TSK

TSK · ಯೋಹಾನನು 8:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

¶ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, ‹“ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.›

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ಯೇಸು ‹“ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,›

ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›

‹ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.›

‹ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.›

ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.

¶ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.