TSK

TSK · ಯೋಹಾನನು 8:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.

‹ಪರಲೋಕದಿಂದ ಇಳಿದು ಬಂದವನೇ, ಅಂದರೆ,›‹ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.›

¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›

‹ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.›

ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.

ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.

¶ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.

ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.