TSK

TSK · ಯೋಹಾನನು 8:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.›

ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, ‹“ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.›

‹ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.›

‹ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.›

¶ ‹“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.›

ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.