‹ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.›
TSK
TSK · ಯೋಹಾನನು 8:31
Treasury of Scripture Knowledge references in ಕನ್ನಡ IRV.
‹ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.›
‹ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.›
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
¶ ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.