TSK

TSK · ಯೋಹಾನನು 9:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.

¶ ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.

¶ ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.

ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.

ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,

¶ “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.

“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?

ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.