TSK

TSK · ಯೋನ 2:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.

¶ ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.

¶ ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.

ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,

ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.

ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.