ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
TSK
TSK · ಯೋನ 2:6
Treasury of Scripture Knowledge references in ಕನ್ನಡ IRV.
ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.
‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.