TSK

TSK · ಯೋನ 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

¶ ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.

ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”

‹ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.›

ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.