ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
TSK
TSK · ಯೋನ 3:8
Treasury of Scripture Knowledge references in ಕನ್ನಡ IRV.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
¶ “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
¶ ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ