“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.
TSK
TSK · ಯೆಹೋಶುವ 10:13
Treasury of Scripture Knowledge references in ಕನ್ನಡ IRV.
¶ ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.
ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
¶ ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.
ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.
ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ, ಮಿಂಚುವ ನಿನ್ನ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.
¶ ‹“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.›
¶ ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.
¶ ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.