TSK

TSK · ಯೆಹೋಶುವ 13:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.

ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.

ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?

ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”