ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.
TSK
TSK · ಯೆಹೋಶುವ 2:14
Treasury of Scripture Knowledge references in ಕನ್ನಡ IRV.
¶ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
¶ ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು
ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
¶ ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,
ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
‹ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.›