ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
TSK
TSK · ಯೆಹೋಶುವ 2:3
Treasury of Scripture Knowledge references in ಕನ್ನಡ IRV.
“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.
ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
¶ ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.