¶ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
TSK
TSK · ಯೆಹೋಶುವ 22:6
Treasury of Scripture Knowledge references in ಕನ್ನಡ IRV.
ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.
ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.
¶ ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
¶ ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.