“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
TSK
TSK · ಯೆಹೋಶುವ 6:2
Treasury of Scripture Knowledge references in ಕನ್ನಡ IRV.
¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು
¶ ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1
ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.