TSK

TSK · ಯೆಹೋಶುವ 6:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.

ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.

ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.

ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.

ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.

ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”