TSK

TSK · ಯೆಹೋಶುವ 9:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.

ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.

¶ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.

“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.

ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.

ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.