¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
TSK
TSK · ಯೂದನು 1:20
Treasury of Scripture Knowledge references in ಕನ್ನಡ IRV.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.
¶ ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
¶ ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.
¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.