TSK

TSK · ಯೂದನು 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›

ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.