ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
TSK
TSK · ನ್ಯಾಯಸ್ಥಾಪಕರು 13:22
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 3:6
TSK
ವಿಮೋಚನಕಾಂಡ 24:10
TSK
ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
ಯೋಹಾನನು 1:18
TSK
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.