ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
TSK
TSK · ನ್ಯಾಯಸ್ಥಾಪಕರು 17:3
Treasury of Scripture Knowledge references in ಕನ್ನಡ IRV.
¶ “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’