TSK

TSK · ನ್ಯಾಯಸ್ಥಾಪಕರು 18:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.

¶ ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.

ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.

¶ ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.

¶ ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.

ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು

ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.

ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.

‹ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?›